ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ
Applications invited for Karnataka State Environment Award
ಕೊಪ್ಪಳ ಮೇ 21 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ 2025-2026ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ, ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿ ತಲಾ ಒಂದು ಲಕ್ಷ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ ಸಂಸ್ಥೆಗಳಿಗೆ, `ಪರಿಸರ ಸಂರಕ್ಷಣೆ’ ಮತ್ತು `ಪರಿಸರ ವ್ಯವಸ್ಥಾಪನೆ’ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ನೀಡಲಾಗುವುದು. ಅರ್ಹ ವ್ಯಕ್ತಿಗಳು ಮತ್ತು ಸಂಸ್ಥೆಯವರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳ ಪ್ರಾದೇಶಿಕ ಕಛೇರಿಗೆ ಅಥವಾ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವಾಲಯದ ವೆಬ್‌ಸೈಟ್ https://forest.karnataka.gov.in & ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್ https://kspcb.karnataka.gov.in ಹಾಗೂ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವೆಬ್‌ಸೈಟ್ https://empri.karnataka.gov.in & ಕರ್ನಾಟಕ ಜೀವವೈವಿಧ್ಯ ಮಂಡಳಿಯ ವೆಬ್‌ಸೈಟ್ https://kbb.karnataka.gov.in ನ್ನು ಸಂಪರ್ಕಿಸಬಹುದು ಎಂದು ಕ.ರಾ.ಮಾ.ನಿ ಮಂಡಳಿಯ ಕೊಪ್ಪಳ ಪ್ರಾದೇಶಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ appeared first on Kalyanasiri.
from Kalyanasiri https://ift.tt/tfY6LZI<
