ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

ಭಾಸ್ಕರ ಪತ್ರಿಕೆ
0

ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ ಗೇಟ್, ತುಮಕೂರು ಈ ಸಂಸ್ಥೆಯು ಜೂನ್ 1 ರಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ, ವಸತಿಯೊಂದಿಗೆ 45 ದಿನಗಳ ಕಂಪ್ಯೂಟರ್ ಡಿಟಿಪಿ ತರಬೇತಿ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತುಮಕೂರು ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಮತ್ತು ಬರೆಯಲು ಬಲ್ಲವಂತವರು 18 ರಿಂದ 50 ವರ್ಷದೊಳಗಿನವರು ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಹಿರೇಹಳ್ಳಿ–572104 ಇಲ್ಲಿಗೆ ತಲುಪಿಸುವಂತೆ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9738351048 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ appeared first on nammatumakuru.



from nammatumakuru https://ift.tt/yREXaQS

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*