ತುಮಕೂರು: ತುಮಕೂರು ನಗರದ 9 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆಯವರೆಗೆ ಡಿಪ್ಲೋಮಾ ಸಿ.ಇ.ಟಿ.–2026, ಪಿ.ಜಿ.ಸಿ.ಇ.ಟಿ.–2026(ಎಂ.ಇ./ ಎಂ.ಟೆಕ್) ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳುಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
The post ಡಿಪ್ಲೋಮಾ ಸಿಇಟಿ, ಪಿಜಿಸಿಇಟಿ ಪರೀಕ್ಷೆ: ನಿಷೇಧಾಜ್ಞೆ ಜಾರಿ appeared first on nammatumakuru.
from nammatumakuru https://ift.tt/ksglHWN
