ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

ಭಾಸ್ಕರ ಪತ್ರಿಕೆ
0

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ಚಾಲನೆ ನೀಡಿದರು.

ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜುಲೈ 01 ರಿಂದ ವಿಬಿಜಿ ರಾಮ್‌ ಜಿ ಯೋಜನೆ ಜಾರಿಗೆ ಬರಲಿದೆ. ಇದೇ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು.

ಜುಲೈ 1 ರಿಂದ ಆರಂಭವಾಗುತ್ತಿರುವ ವಿಬಿಜಿ ರಾಮ್‌ಜಿ ಯೋಜನೆಯಲ್ಲಿ ಒಂದು ಅರ್ಹ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಕಲ್ಪಿಸಲಾಗುವುದು. ಈ ಯೋಜನೆಯು ಭಾರತ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ದೃಷ್ಟಿಕೋನವಾಗಿದ್ದು, ಸ್ವಾತಂತ್ರ್ಯದ 100 ವರ್ಷಗಳ ನೆನಪಿಗಾಗಿ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ನಾವೀನ್ಯತೆ, ಸುಸ್ಥಿರತೆ ಮತ್ತು ಉತ್ತಮ ಆಡಳಿತಕ್ಕೆ ಒತ್ತು ನೀಡುತ್ತದೆ, ಸಮಾಜದ ಎಲ್ಲಾ ವರ್ಗಗಳಿಗೂ ಸಮೃದ್ಧಿಯನ್ನು ಖಚಿತಪಡಿಸುತ್ತದೆ ಎಂದರು.

ಈ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ, ಮಾಸ್ಟರ್ ಟ್ರೈನರ್ ಗಳಾದ ಸುರೇಶ್, ಸಹಾಯಕ ನಿರ್ದೇಶಕರು (ಗ್ರಾ.ಉ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುಬ್ಬರಾಜು ಅರಸ್, ಗಂಗಾಧರ್ ಸೇರಿದಂತೆ ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.

ಯೋಜನೆಯಡಿ ಸ್ವಯಂಪ್ರೇರಿತರಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕ ಸದಸ್ಯರ ಕುಟುಂಬಕ್ಕೆ, ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತರಿ. ವಿಕಸಿತ ಗ್ರಾಮ ಪಂಚಾಯತ್ ಯೋಜನೆಗಳ ಮೂಲಕ ಒಗ್ಗೂಡಿಸುವಿಕೆ, ಸ್ಯಾಚುರೇಷನ್ ಆಧಾರಿತ ಯೋಜನೆ ಮತ್ತು ಸರ್ಕಾರದ ಸಮಗ್ರ ಕಾರ್ಯಚರಣೆ ವಿತರಣೆಯನ್ನು ಸಾಂಸ್ಥಿಕರಿಸುವುದು. ಕೃಷಿ ಚಟುವಟಿಕೆಗಳ ಹಂಗಾಮಿನ ಉತ್ತುಂಗದ ಸಮಯದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಯನ್ನು ಸುಗಮಗೊಳಿಸಲು 60 ದಿನಗಳ ವಿರಾಮವಿರಲಿದೆ.

| ಬಿ.ವಿ.ಅಶ್ವಿಜ, ಸಿಇಒ, ಜಿ.ಪಂ


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ appeared first on nammatumakuru.



from nammatumakuru https://ift.tt/GnNAM58

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*