ಜೂನ್‌-28 ಭಾನುವಾರ ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮದಲ್ಲಿಕೊಪ್ಪಳ ತಾಲ್ಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನ.

ಭಾಸ್ಕರ ಪತ್ರಿಕೆ
0
Koppal Taluk 2nd Chutuku Sahitya Sammelan at Bhagyanagar village of Koppal Taluk on Sunday, June 28.

ಜೂನ್‌-28 ಭಾನುವಾರ ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮದಲ್ಲಿಕೊಪ್ಪಳ ತಾಲ್ಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನ.

ಗಂಗಾವತಿ: ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್‌-28 ಭಾನುವಾರ ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮದ ಶ್ರೀ ನಿಮಿಷಾಂಬದೇವಿ ಸಮುದಾಯ ಭವನದಲ್ಲಿ ನಡೆಯಲಿದೆ. ಶಿಕ್ಷಕರು ಹಾಗೂ ಕವಿಗಳಾದ ಶ್ರೀನಿವಾಸ ಚಿತ್ರಗಾರ ಅವರು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ಧಾರೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ ತಿಳಿಸಿದ್ದಾರೆ.
ಶ್ರೀನಿವಾಸ ಚಿತ್ರಗಾರ ಅವರು ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದವರಾಗಿದ್ದು, ಇವರು ಯತ್ನಟ್ಟಿಯ ಸ.ಹಿ.ಪ್ರಾ ಶಾಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಇವರು ಒಬ್ಬ ಹಿರಿಯ ಕವಿಯಾಗಿ 15ಕ್ಕೂ ಅಧಿಕ ಮಕ್ಕಳ ಸಾಹಿತ್ಯ ಸೇರಿದಂತೆ ಇತರ ಪುಸ್ತಕಗಳನ್ನು ಹೊರತಂದಿದ್ದಾರೆ. ಅಲ್ಲದೇ ವಿವಿಧ ಕವಿಗೋಷ್ಠಿಯಲ್ಲಿ ಹಾಗೂ ಸಭೆ ಸಮಾರಂಭಗಳಲ್ಲಿ ಉದ್ಘಾಟಕರಾಗಿ, ಅಧ್ಯಕ್ಷರಾಗಿ, ಉಪನ್ಯಾಸಕರಾಗಿ ಭಾಗವಹಿಸಿದ್ದಾರೆ. ಸ್ಥಳೀಯ ಸಾಹಿತ್ಯ ಸಮ್ಮೇಳನಗಳ ಕೆಲವು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.
ಈ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ಚುಟುಕು ಕವಿಗೋಷ್ಠಿ, ಸ್ಮರಣ ಸಂಚಿಕೆ ಬಿಡುಗಡೆ, ಸಾಧಕರಿಗೆ ಗೌರವ ಪುರಸ್ಕಾರ, ಯುವ ನೃತ್ಯೋತ್ಸವ, ಕಲಾಮೇಳಗಳ ಸಂಗ ಕಾರ್ಯಕ್ರಮಗಳು ಜರುಗಲಿದ್ದು, ಈ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಕವಿಗಳು, ಲೇಖಕ, ಲೇಖಕಿಯರು, ಯುವಕರು ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಗಂಗಾವತಿ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಅಶೋಕ ಗುಡಿಕೋಟಿ ತಿಳಿಸಿದರು.

The post ಜೂನ್‌-28 ಭಾನುವಾರ ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮದಲ್ಲಿಕೊಪ್ಪಳ ತಾಲ್ಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನ. appeared first on Kalyanasiri.



from Kalyanasiri https://ift.tt/oLrmzOR<

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*