ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಭಾಸ್ಕರ ಪತ್ರಿಕೆ
0

ಪಾವಗಡ: ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆಯನ್ನು ಮಂಜೂರು ಮಾಡಿಸಿರುವ  ಹೆಚ್.ವಿ.ವೆಂಕಟೇಶ್ ಅವರನ್ನು ಗ್ರಾಮದ ಮುಖಂಡರು ಹಾಗೂ ಶಾಲಾ ಸಿಬ್ಬಂದಿಗಳು ಗುರುವಾರ ಹನುಮಂತನಹಳ್ಳಿಯ ತೋಟದ ಮನೆಯಲ್ಲಿ ಭೇಟಿಯಾಗಿ ಅಭಿನಂದಿಸಿ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಮುಖಂಡರು, ಶಿಕ್ಷಣ ಕ್ಷೇತ್ರಕ್ಕೆ  ವೆಂಕಟೇಶ್ ಅವರು ಮಾಡಿರುವ ಕೊಡುಗೆ ಅಮೂಲ್ಯವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆ ಮಂಜೂರಾತಿಯಿಂದ ಗ್ರಾಮದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಮದಕರಿ ನಾಯಕ, ಮಂಜುನಾಥ್, ರಾಮು ಹಾಗೂ ಶಿಕ್ಷಕರಾದ ರಾಜಗೋಪಾಲ್, ಜಯಣ್ಣ, ಹನುಮಂತರಾಜು, ಚನ್ನಬಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ: ನಂದೀಶ್ ನಾಯ್ಕ ಪಿ., ಪಾವಗಡ


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

The post ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ appeared first on nammatumakuru.



from nammatumakuru https://ift.tt/1UQjYEe

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*