MP Priyanka Jarkiholi urges Madabhavi to be granted a government high school

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಮದಭಾವಿಗೆ ಸರ್ಕಾರಿ ಪ್ರೌಢಶಾಲೆಗೆ ಮಂಜೂರು ಮಾಡಲುಒತ್ತಾಯಿಸಿ ಮನವಿ
ವರದಿ: ಮಹೇಶ್ ಶರ್ಮಾ
ಅಥಣಿ: ತಾಲೂಕಿಗೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆ ಹಾಗೂ ಸ್ಥಳೀಯ ಮುಖಂಡರ ವತಿಯಿಂದ ಸನ್ಮಾನಿಸಿ, ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಯಿತು.
ಸುಮಾರು 10 ಸಾವಿರ ಜನಸಂಖ್ಯೆ ಹೊಂದಿರುವ ದೊಡ್ಡ ಗ್ರಾಮವಾದ ಮದಭಾವಿಯಲ್ಲಿ ಸರ್ಕಾರಿ ಕನ್ನಡ ಪ್ರೌಢಶಾಲೆ ಇಲ್ಲದೆ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ತಕ್ಷಣವೇ ಇಲ್ಲಿ ಶಾಲೆ ಮಂಜೂರು ಮಾಡಬೇಕೆಂದು ಸಂಸ್ಥೆಯ ಮುಖ್ಯಸ್ಥರಾದ ಪ್ರವೀಣ ನಾಯಿಕ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಸಂಸದರು, ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ವೇಳೆ ಮುಖಂಡ ಶರಣಪ್ಪಾ ಶಿಂಧೆ ಮಾತನಾಡಿ, ತಾಲೂಕಿನ ಹಳ್ಳಿಗಳ ರಸ್ತೆಗಳ ಸುಧಾರಣೆ, ಮಹಿಳೆಯರಿಗೆ ಹೈಟೆಕ್ ಶೌಚಾಲಯ, ಶಿವಯೋಗಿ ನಗರದ ಬೀದಿ ದೀಪದ ಸಮಸ್ಯೆ ಬಗೆಹರಿಸುವುದು ಹಾಗೂ ಶಿವಯೋಗಿ ನಗರವನ್ನು ಪುರಸಭೆ ವ್ಯಾಪ್ತಿಗೆ ಸೇರಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕಿರಣ ಪಾಟೋಲೆ, ಅನಿಲ ಭಾಮನೆ, ಶಿವಾನಂದ ನಾವಿ, ಎಂ. ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

The post ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಮದಭಾವಿಗೆ ಸರ್ಕಾರಿ ಪ್ರೌಢಶಾಲೆಗೆ ಮಂಜೂರು ಮಾಡಲುಒತ್ತಾಯಿಸಿ ಮನವಿ appeared first on Kalyanasiri.
from Kalyanasiri https://ift.tt/tYSB27h<
