ಮೂಡಿಗೆರೆಯಲ್ಲಿ ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು: ಇಬ್ಬರು ಖದೀಮರ ಬಂಧನ, ₹18,000 ನಕಲಿ ಹಣ ವಶ!

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು/ಮೂಡಿಗೆರೆ: ಮೂಡಿಗೆರೆ ಪಟ್ಟಣದಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವೊಂದನ್ನು ಮೂಡಿಗೆರೆ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ

. ಸಮಯೋಚಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರು ಮೂಲದ ಮಹಮದ್ ಅಲಿ ಹಾಗೂ ಮೂಡಿಗೆರೆಯ ಸ್ಥಳೀಯ ನಿವಾಸಿ ಮಹೇಶ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅವರಿಂದ ₹200 ಮುಖಬೆಲೆಯ ಒಟ್ಟು ₹18,000 ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಡಿಗೆರೆ ಪಟ್ಟಣದ ನೂತನ ಲೇಔಟ್ ಪ್ರದೇಶದಲ್ಲಿ ಕೆಲ ವ್ಯಕ್ತಿಗಳು ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದಾರೆ ಎಂಬ ನಿಖರ ಮಾಹಿತಿ ಆಧರಿಸಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದರು. ಈ ವೇಳೆ ಸ್ಥಳದಲ್ಲೇ ಸಿಕ್ಕಿಬಿದ್ದ ಇಬ್ಬರು ಆರೋಪಿಗಳ ಬಳಿ ತಲಾ 45 ರಂತೆ ಒಟ್ಟು 90 ನಕಲಿ ನೋಟುಗಳು ಪತ್ತೆಯಾಗಿವೆ.

ಪೊಲೀಸರು ಜಪ್ತಿ ಮಾಡಿದ ನೋಟುಗಳನ್ನು ಪರಿಶೀಲಿಸಿದಾಗ ಅಚ್ಚರಿಯ ವಿಷಯವೊಂದು ಬೆಳಕಿಗೆ ಬಂದಿದೆ. ಆರೋಪಿಗಳು ತಂದಿದ್ದ ನೋಟುಗಳ ಮೇಲೆ ‘Reserve Bank of India’ ಎನ್ನಬೇಕಾದ ಜಾಗದಲ್ಲಿ ‘Beserve Bank of India’ ಎಂದು ತಪ್ಪಾಗಿ ಮುದ್ರಿಸಲಾಗಿತ್ತು. ಮಂಗಳೂರಿನಿಂದ ಆಗಮಿಸಿದ್ದ ಮಹಮದ್ ಅಲಿ, ಮೂಡಿಗೆರೆಯ ಮಹೇಶ್ ಜೊತೆ ಸೇರಿ ಈ ನಕಲಿ ನೋಟುಗಳನ್ನು ಮಾರುಕಟ್ಟೆಯಲ್ಲಿ ಚಲಾವಣೆ ಮಾಡಲು ಹಾಗೂ ಮಾರಾಟ ಮಾಡಲು ಸಂಚು ರೂಪಿಸಿದ್ದ ಎಂಬುದು ತಿಳಿದುಬಂದಿದೆ.

ಸದ್ಯ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ನಕಲಿ ಹಣವನ್ನು ಜಪ್ತಿ ಮಾಡಲಾಗಿದೆ. ಈ ಖೋಟಾ ನೋಟು ಜಾಲದ ಹಿಂದೆ ಇನ್ಯಾರಿದ್ದಾರೆ ಮತ್ತು ಈ ನೋಟುಗಳ ಮುದ್ರಣ ಎಲ್ಲಿ ನಡೆಯುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

The post ಮೂಡಿಗೆರೆಯಲ್ಲಿ ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು: ಇಬ್ಬರು ಖದೀಮರ ಬಂಧನ, ₹18,000 ನಕಲಿ ಹಣ ವಶ! appeared first on Mahanayaka.



from Mahanayaka https://ift.tt/kJWrK5l

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*