ಅಥಣಿ, ಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ‘DSS ಭೀಮವಾದ’ ಆಗ್ರಹ

ಭಾಸ್ಕರ ಪತ್ರಿಕೆ
0

ಅಥಣಿ: ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದ್ದು, ಸರ್ಕಾರ ಕೂಡಲೇ ಈ ಎರಡೂ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲೂಕಾ ಅಧ್ಯಕ್ಷ ಸಾಗರ ಕಾಂಬಳೆ ಆಗ್ರಹಿಸಿದ್ದಾರೆ.

ಅಥಣಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದಲ್ಲಿ ಮಳೆಯಿಲ್ಲದೆ ಪರಿಸ್ಥಿತಿ ಗಂಭೀರವಾಗಿದೆ. ರೈತರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದು, ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.

ಬೇಡಿಕೆಗಳು:

ಗೋಶಾಲೆಗಳ ಸ್ಥಾಪನೆ: ಕುಡಿಯಲು ನೀರು ಹಾಗೂ ಮೇವಿನ ಕೊರತೆಯಿಂದ ದನ-ಕರುಗಳು ಪರದಾಡುತ್ತಿದ್ದು, ಜಾನುವಾರುಗಳ ರಕ್ಷಣೆಗಾಗಿ ತಕ್ಷಣವೇ ಗೋಶಾಲೆಗಳನ್ನು ಆರಂಭಿಸಬೇಕು.

ಬೆಳೆ ಹಾನಿಗೆ ಪರಿಹಾರ: ಮುಂಗಾರು ಋತುವಿನಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗಳು ಮಳೆಯಿಲ್ಲದೆ ಒಣಗಿ ಸಂಪೂರ್ಣ ನಾಶವಾಗಿವೆ. ಹೀಗಾಗಿ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಆರ್ಥಿಕ ಪರಿಹಾರ ಒದಗಿಸಬೇಕು.

ಬರಪೀಡಿತ ಘೋಷಣೆ: ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಸರ್ಕಾರ ತಕ್ಷಣವೇ ಅಥಣಿ ಮತ್ತು ಕಾಗವಾಡ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಭೀಮವಾದ) ಅಥಣಿ ನಗರ ಅಧ್ಯಕ್ಷ ಕಪೀಲ ಘಟಕಾಂಬಳೆ, ಮುಖಂಡರಾದ ರವಿ ಬನಸೋಡೆ ಸೇರಿದಂತೆ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

The post ಅಥಣಿ, ಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ‘DSS ಭೀಮವಾದ’ ಆಗ್ರಹ appeared first on Mahanayaka.



from Mahanayaka https://ift.tt/rUcT4DY

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*