ಮೂಡುಬಿದಿರೆ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಮರಿಯಂ ನಿಕೇತನ್ ಶಾಲೆಯ ವಿದ್ಯಾರ್ಥಿಗಳ ಆಯ್ಕೆ

ಭಾಸ್ಕರ ಪತ್ರಿಕೆ
0

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ (ದಕ್ಷಿಣ ಕನ್ನಡ) ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳುವಾಯಿ ಮರಿಯಂ‌ ನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಆ್ಯಶೆಲ್ ಡಿಸೋಜಾ, ಭೂಮಿಕಾ ಹಾಗೂ ಪಲ್ಲವಿ ಅವರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತಮ್ಮ ಅತ್ಯುತ್ತಮ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿ ವಿಜೇತರಾಗುವ ಮೂಲಕ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಯಿಂದ ಶಾಲೆಗೆ ಕೀರ್ತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೆಸಿಂತಾ ಲಸ್ರಾದೊ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಹಾಗೂ ಮುಂಬರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಿಗೂ ಶುಭ ಹಾರೈಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

The post ಮೂಡುಬಿದಿರೆ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಮರಿಯಂ ನಿಕೇತನ್ ಶಾಲೆಯ ವಿದ್ಯಾರ್ಥಿಗಳ ಆಯ್ಕೆ appeared first on Mahanayaka.



from Mahanayaka https://ift.tt/rCxJkDG

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*