ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

ಭಾಸ್ಕರ ಪತ್ರಿಕೆ
0

ಕಿಕ್ಕೇರಿ:  ಪಟ್ಟಣದಲ್ಲಿ ಮುಂಬರುವ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸುವ ಉದ್ದೇಶದಿಂದ ಕಿಕ್ಕೇರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭರ್ಜರಿ ಪಥಸಂಚಲನ ನಡೆಸಿದರು.

ಕಿಕ್ಕೇರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಜಯರಾಮು ಅವರ ನೇತೃತ್ವದಲ್ಲಿ ಈ ಪಥಸಂಚಲನ ನಡೆಯಿತು.

ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಜ್ಜೆಹಾಕುವ ಮೂಲಕ ಸಾರ್ವಜನಿಕರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದರು.

ಹಬ್ಬವನ್ನು ವಿವಿಧ ಸಮುದಾಯಗಳ ನಡುವೆ ಪರಸ್ಪರ ಸಾಮರಸ್ಯ, ಪ್ರೀತಿ ಮತ್ತು ಸಹಬಾಳ್ವೆಯಿಂದ ಸಂಭ್ರಮದಿಂದ ಆಚರಿಸುವಂತೆ ವೃತ್ತ ನಿರೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಪಥಸಂಚಲನದಲ್ಲಿ ಕಿಕ್ಕೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.


ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

The post ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ appeared first on nammatumakuru.



from nammatumakuru https://ift.tt/yUJoct9

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*