ಮಗುವಿಗೆ ಜನ್ಮ ನೀಡಿದ ಬಾಲಕಿ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಭಾಸ್ಕರ ಪತ್ರಿಕೆ
0

ವಿಟ್ಲ:  ಮೊಬೈಲ್ ಮೂಲಕ ಪರಿಚಯವಾದ ಬಾಲಕಿಯೊಬ್ಬಳನ್ನು ತನ್ನ ಮನೆಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿರುವ ಗಂಭೀರ ಪ್ರಕರಣ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಕೇರಳ ಮೂಲದ ಬಾಲಕನೊಬ್ಬ ಮೊಬೈಲ್ ಫೋನ್ ಮೂಲಕ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡು, ಬಳಿಕ ಆಕೆಯನ್ನು ತನ್ನ ಮನೆಗೆ ಕರೆಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಾಲಕನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ 2025ರ ಡಿಸೆಂಬರ್ 21ರಂದು ಈ ಘಟನೆ ನಡೆದಿದೆ.

ಕಳೆದ ಸೆಪ್ಟೆಂಬರ್ 8ರಂದು ಬಾಲಕಿಯ ಆರೋಗ್ಯದಲ್ಲಿ ತೀವ್ರ ಏರುಪೇರುಂಟಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಸೆಪ್ಟೆಂಬರ್ 9ರಂದು ವೈದ್ಯಕೀಯ ತಪಾಸಣೆ ನಡೆಸಿದಾಗ, ಬಾಲಕಿ ಮಗುವಿಗೆ ಜನ್ಮ ನೀಡಿರುವುದು ವೈದ್ಯಕೀಯ ಪರೀಕ್ಷೆಯಿಂದ ಬೆಳಕಿಗೆ ಬಂದಿದೆ.

ಈ ಆಘಾತಕಾರಿ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆ ನಡೆದ ನಿರ್ದಿಷ್ಟ ಸ್ಥಳದ ಅಧಿಕಾರ ವ್ಯಾಪ್ತಿಯ ಆಧಾರದ ಮೇಲೆ, ಮುಂದಿನ ಕಾನೂನು ಕ್ರಮಕ್ಕಾಗಿ ಈ ಪ್ರಕರಣವನ್ನು ಸಂಬಂಧಪಟ್ಟ ಮತ್ತೊಂದು ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

The post ಮಗುವಿಗೆ ಜನ್ಮ ನೀಡಿದ ಬಾಲಕಿ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು appeared first on Mahanayaka.



from Mahanayaka https://ift.tt/tVuIGJZ

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*