ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರೇ ಹಾಗೂ ವಾಹನ ಸವಾರರೇ ಎಚ್ಚರ! ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಆತಂಕಕಾರಿ ಘಟನೆಯೊಂದು ವರದಿಯಾಗಿದೆ.
ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಪ್ರಸಿದ್ಧ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಮಂಗಳೂರು ಮೂಲದ ಲಾರಿಗೆ ನಾಲ್ವರು ಯುವಕರು ಕೈ ಅಡ್ಡಹಾಕಿ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಆದರೆ, ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಮುಂದೆ ಸಾಗಿದ್ದಾರೆ. ಇದರಿಂದ ಕೆರಳಿದ ಯುವಕರು ಲಾರಿಯ ಮೇಲೆ ಮನಸೋಇಚ್ಛೆ ಕಲ್ಲು ತೂರಾಟ ನಡೆಸಿದ್ದಾರೆ.
ಗಾಂಜಾ ಅಮಲಿನಲ್ಲಿ ಕೃತ್ಯ ಎಸಗಿರುವ ಶಂಕೆ:
ಕಲ್ಲು ತೂರಾಟ ನಡೆಸಿದ ಯುವಕರು ಗಾಂಜಾ ಸೇವಿಸಿದ್ದರೆಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಗಾಂಜಾ ಅಮಲಿನಲ್ಲಿಯೇ ಈ ಪುಂಡಾಟಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದು, ವೈದ್ಯಕೀಯ ತಪಾಸಣೆಗಾಗಿ (ಮೆಡಿಕಲ್ ಟೆಸ್ಟ್) ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ಸಂಬಂಧ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಘಾಟಿಯಲ್ಲಿ ಸಂಚರಿಸುವ ಚಾಲಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
The post ಚಾರ್ಮಾಡಿ ಘಾಟ್ ನಲ್ಲಿ ಪುಂಡರ ಅಟ್ಟಹಾಸ: ಲಾರಿ ನಿಲ್ಲಿಸಲಿಲ್ಲವೆಂದು ಕಲ್ಲು ತೂರಾಟ, ನಾಲ್ವರು ವಶಕ್ಕೆ! appeared first on Mahanayaka.
from Mahanayaka https://ift.tt/qhGBOjV
